ಬೆಂಗಳೂರು : ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿವಾರ್ ಚಂಡಮಾರುತ ಸದ್ಯ ವಾಯುವ್ಯ ದಿಕ್ಕಿನೆಡೆಗೆ ಸಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ ಮತ್ತು ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತೆ ನಾಳೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ