ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಎರಡು ಹಂತಗಳಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ರಾಜ್ಯ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕ ಪ್ರಕಟಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೊದಲ ಹಂತಕ್ಕೆ ಡಿಸೆಂಬರ್ 22 ಹಾಗೂ ಎರಡನೇ ಹಂತದಲ್ಲಿ ಡಿಸೆಂಬರ್ 27ಕ್ಕೆ ಮತದಾನ ನಡೆಯಲಿದೆ. ಡಿ.30 ಮತ ಎಣಿಕೆ ನಡೆಯಲಿದೆ.
ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ರಾಜ್ಯದ 5,762 ಗ್ರಾಮ ಪಂಚಾಯಿತಿಗಳ 35, 884 ಕ್ಷೇತ್ರಗಳ 92,121 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದಲ್ಲಿ 113 ತಾಲೂಕುಗಳ 2,930 ಹಾಗೂ 2ನೇ ಹಂತದಲ್ಲಿ 113 ತಾಲೂಕುಗಳ 2,832 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತ:
ನಾಮಪತ್ರ ಸಲ್ಲಿಕೆ ಆರಂಭ- ಡಿ.7
ನಾಮಪತ್ರ ಸಲ್ಲಿಸಲು ಕೊನೆಯ ದಿನ- ಡಿ.11.
ಮತದಾನ- ಡಿ.22
ಎರಡನೇ ಹಂತ:
ನಾಮಪತ್ರ ಸಲ್ಲಿಕೆ ಆರಂಭ ಡಿ.11
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಡಿ.16
ಮತದಾನ: ಡಿ.27
ಮತ ಎಣಿಕೆ: ಡಿ.30