Breaking News

ಸಾರಿಗೆ ನೌಕರರ ಮುಷ್ಕರ: ಸಂಧಾನ ಯಶಸ್ವಿ. ಬಸ್ ಗಳು ರೈಟ್ ರೈಟ್!


ಬೆಂಗಳೂರು: ಸಾರಿಗೆ ನೌಕರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು, ಮೂರು ದಿನಗಳ ಬಳಿಕ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್​ ಬಿದ್ದಿದೆ.

ಆದರೇ ಸಭೆ ಮುಗಿಸಿದ ನಂತರ ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತವಾಗಿ ಘೋಷಣೆ ಆಗುವವರೆಗೆ ಕಾದು ನೋಡಬೇಕಿದೆ.

ತಮ್ಮನ್ನೂ ಸರ್ಕಾರಿ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು ಎಂಬುದರ ಜತೆಗೆ ಹಲವು ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಭಾನುವಾರ ಸಂಜೆ ನಡೆದ ಸಂಧಾನ ಸಭೆ ಸಕ್ಸಸ್​ ಆಗಿದ್ದು, ಮುಷ್ಕರ ಕೈ ಬಿಡುವ ಬಗ್ಗೆ ಫ್ರೀಡಂ ಪಾರ್ಕ್​ನಲ್ಲಿ ಘೋಷಣೆ ಮಾಡುವುದಾಗಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ.

ಸರ್ಕಾರಿ ನೌಕರರ ಆರನೇ ವೇತನ ಜಾರಿ ಮಾಡಲು ಒಪ್ಪಿಗೆ ನೀಡಿದೆಯಾದರೂ ಸರ್ಕಾರಿ ನೌಕರರು ಅಂತ ಪರಿಗಣಿಸಲ್ಲ ಎಂದು ಸರ್ಕಾರ ಸ್ಪಷ್ಟನೆ ಕೊಟ್ಟಿದೆ.

ಕೋವಿಡ್​ನಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ, ಸಿಬ್ಬಂದಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.

ಇನ್ನು ಇಂದು(ಭಾನುವಾರ) ರಾತ್ರಿಯಿಂದಲೇ ಸಾರಿಗೆ ಬಸ್​ ಸಂಚಾರ ಆರಂಭ ಆಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಆದರೇ ಸಭೆ ಮುಗಿಸಿದ ನಂತರ ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತವಾಗಿ ಘೋಷಣೆ ಆಗುವವರೆಗೆ ಕಾದು ನೋಡಬೇಕಿದೆ 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!

  ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ