ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, ಭೀಮಶಿ ಮುಡಶಿಕರ,ಹಾಲಪ್ಪ ಕರಿಗಾರ, ಪುನ್ನಪ್ಪ ಸಾಂಗಲಿ,ಶಿವಾಜಿ ಕರೋಶಿ, ಶಬ್ಬೀರ ಸರ್ಕಾವಸ, ವಿಠ್ಠಲ ಕರೋಶಿ ಸೇರಿದಂತೆ ಅನೇಕರು ಇದ್ದರು.