ಬೆಂಗಳೂರು : ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಡಿಸೆಂಬರ್ 22 ರಂದು ಹಾಗೂ ಎರಡನೇ ಹಂತದ ಗ್ರಾಮ ಪಂಚಾಯತ್‍ಗಳಿಗೆ ಡಿಸೆಂಬರ್ 27 ರಂದು ನಡೆಯಲಿದೆ. ಮತದಾನಕ್ಕೆ ಭಾರತ ಚುನಾವಣಾ ಆಯೋಗ ನೀಡಿದ ಗುರುತುಪತ್ರ ಅಥವಾ ಈ ಕೆಳಕಂಡ ಯಾವುದಾದರು ಒಂದು ದಾಖಲೆಗಳನ್ನು ತೋರಿಸಿ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಮತದಾನ ಮಾಡಬಹುದು.
1. ಪಾಸ್‍ಪೋರ್ಟ್
2.ಡ್ರೈವಿಂಗ್ ಲೈಸೆನ್ಸ್,
3.ಆದಾಯ ತೆರಿಗೆ ಗುರುತಿನ ಚೀಟಿ 4.ರಾಜ್ಯ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
5.ಸಾರ್ವಜನಿಕ ವಲಯದ ಬ್ಯಾಂಕ್ / ಕಿಸಾನ್ ಮತ್ತು ಅಂಚೆ ಕಛೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ
7. ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಟ್ಟಿರುವ ಗುರುತಿನ ಚೀಟಿಗಳು,
8. ಭಾವಚಿತ್ರವಿರುವ ನೋಂದಾಯಿತ ಡೀಡ್‍ಗಳು/ ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು,
9.ಭಾವಚಿತ್ರವಿರುವ ಪಡಿತರ ಚೀಟಿಗಳು
10. ಸಕ್ಷಮ ಪ್ರಾಧಿಕಾ ನೀಡಿರುವ ಭಾವಚಿತ್ರವಿರುವ ಪ್ರಮಾಣ ಪತ್ರಗಳು,
11. ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ/ ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು,
12.ವೃದ್ಧಾಪ್ಯ ವೇತನ ಆದೇಶಗಳು,
13.ವಿಧವಾ ವೇತನ ಆದೇಶಗಳು,
14.ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು,
15.ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಗಿ,
16. ಅಂಗವೀಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿಗಳು,
17.ಮಾಜಿ ಯೋಧರ ಭಾವಚಿತ್ರವಿರುವ ಸಿ.ಎಸ್.ಡಿ. ಕ್ಯಾಂಟಿನ್ ಕಾರ್ಡ್,
18.ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ,
19.ಭಾವಚಿತ್ರವಿರುವ ಉದ್ಯೋಗ ಕಾರ್ಡ್,
20.ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್,
21.ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು,
22.ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರಿಕರ ಗುರುತಿನ ಚೀಟಿಗಳು,
23. ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿರುವ ಕುಟುಂಬದ ಸದಸ್ಯರ ಹೆಸರು ಮತ್ತು ವಯಸ್ಸು ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರ ಇರುವ ತಾತ್ಕಾಲಿಕ / ಮೂಲ ಪಡಿತರ ಚೀಟಿ,
24.ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸಾರ್ಟ್ ಕಾರ್ಡ್‍ಗಳು (ಕಾರ್ಮಿಕ ಮಂತ್ರಾಲಯ ಯೋಜನೆ) ಹಾಗೂ ಆಧಾರ ಕಾರ್ಡ್ ಒಳಗೊಂಡಂತೆ ನಿಗಧಿಪಡಿಸಿದ ಭಾವಚಿತ್ರಸಹಿತ ಯಾವುದಾದರೂ ಒಂದು ದಾಖಲೆ ಸಲ್ಲಿಸಿ ಮತದಾನ ಮಾಡಬಹುದು.