Breaking News

ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿ ದಿಢೀರ್ ಬದಲಾವಣೆ!


ಬೆಂಗಳೂರು: ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರ (ಡಿ.23) ಜ. 2ರವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವಿನಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಕಚೇರಿ ಟ್ವೀಟ್‌ ಮಾಡಿದೆ.

ರಾಜ್ಯದಲ್ಲಿ ಇಂದಿನಿಂದ (ಡಿ.23ರಿಂದ) ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ಜಾರಿ

 

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಸಮಯದಲ್ಲಿಯೂ ಬದಲಾವಣೆ ಆಗಿದೆ. ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರಲಿದೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿ ನಿಷೇಧ; ಭ್ರಷ್ಟಾಚಾರ, ಲಂಚಬಾಕ ಅಧಿಕಾರಿಗಳಿಗೆ ಅನುಕೂಲವಾಯಿತಾ?

ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿಯನ್ನು ನಿಷೇಧಿಸಿ ಆಡಳಿತ ಸುಧಾರಣಾ ಇಲಾಖೆ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಈ ರೀತಿ ಮೊಬೈಲ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ