ಕರ್ನಾಟಕ ವಿಧಾನಪರಿಷತ್ತಿನ
ಉಪ ಸಭಾಪತಿಯಾಗಿದ್ದ *ಶ್ರೀ ಎಸ್ ಎಲ್ ಧರ್ಮೇಗೌಡ* ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಜ್ಜನ ವ್ಯಕ್ತಿಯಾಗಿದ್ದ *ಧರ್ಮೇಗೌಡ* ರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಚಿವ *ರಮೇಶ್ ಜಾರಕಿಹೊಳಿ*, ಸಂತಾಪ ಸೂಚಿಸಿದ್ದಾರೆ.
*ಶ್ರೀ ಎಸ್.ಎಲ್. ಧರ್ಮೇಗೌಡ* ರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದ್ದು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ, ಕಾರ್ಯಕರ್ತರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು *ರಮೇಶ್ ಜಾರಕಿಹೊಳಿ* ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.