ಬೆಳಗಾವಿ: ಗ್ರಾಪಂಗೆ ಆಯ್ಕೆಯಾಗಿರುವ ನೂತನ ಸದಸ್ಯರು ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು.
ಸವದತ್ತಿ ತಾಲೂಕಿನ ಮುರಗೋಡದಲ್ಲಿ ಇಂದು ನೂತನ ಗ್ರಾಮ ಪಂಚಾಯಿತಿ ಸದಸ್ಯರ ಭೇಟಿ ಮಾಡಿ ಮಾತುಕತೆ ನಡೆಸಿ ಅಭಿನಂದನೆ ಸಲ್ಲಿಸಿದರು.
ಗ್ರಾಮದ ಜನತೆ ನಿಮ್ಮ ಮೇಲೆ ವಿಶ್ವಾಸವಿಟ್ಟು, ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ. ಅದೇ ರೀತಿ ನೀವು ಕೂಡ ಗ್ರಾಮ ಅಭಿವೃದ್ದಿಗೆ ಮಹತ್ವ ನೀಡಬೇಕು. ಸರ್ಕಾರದ ಯೋಜನೆಗಳ ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ನೂತನ ಗ್ರಾಪಂ ಸದಸ್ಯರು ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೂಗುಚ್ಚ ನೀಡಿ ಅದ್ದೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್, ಗೀತಾ ದೇಸಾಯಿ, ಸಂತೋಷ ಶೆಟ್ಟರ್, ಪ್ರಶಾಂತ ಪಟ್ಟಣಶೆಟ್ಟಿ, ತಾಲೂಕಾ ಯುವ ಮೋರ್ಚಾ ಅಧ್ಯಕ್ಷ ಕಾರ್ತಿಕ ಪಾಟೀಲ್, ಲಕ್ಷ್ಮೀ ಗುಡಸೆ, ಚಂದ್ರಶೇಖರ್, ಭೀಮಶಿ ಮುರಗೋಡ, ಚಿದಂಬರ ಕುರುಬರ ಸೇರಿದಂತೆ ಗ್ರಾಮ ಮುಖಂಡರು ಇದ್ದರು.
CKNEWSKANNADA / BRASTACHARDARSHAN CK NEWS KANNADA