ಅಥಣಿ ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಸ್ಥಳ ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು.
ನಂತರ ಐನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA