ಬೆಳಗಾವಿ: ತಾಲೂಕಿನ ಕಾಕತಿ ಗ್ರಾಮದಲ್ಲಿ 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಪರಿಶೀಲಿಸಿದರು.
“ಗುಣಮಟ್ಟದ ಕಾಮಗಾರಿ ಕೈಗೊಳ್ಳಿ, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ” ಎಂದು ಸತೀಶ ಅವರು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಮುಖಂಡರಾದ ರಾಮಣ್ಣ ಗುಳ್ಳಿ, ಸುರೇಶ ನಾಯ್ಕ್, ಮಾರುತಿ ಮಸ್ತಿ, ಮಾರುತಿ ಚೌಗಲೆ, ಹನುಮಂತ ಮುದುಗನವರ, ಬಸು ಜಿದ್ದಿ, ವೀರಪ್ಪ ಪಾಟೀಲ ಸೇರಿ ಇನ್ನಿತರರು ಇದ್ದರು.