Breaking News

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿ :ಮಂಗಳಾ ಅಂಗಡಿ


ಸವದತ್ತಿ: ನಗರದಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿ ಎಂದು ಸಾರ್ವಜನಿಕರಲ್ಲಿ ಮತಯಾಚಿಸಿದರು.

ಕೇಂದ್ರದ ಮಾಜಿ ಸಚಿವರಾದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರಿಗೆ ಹಾಗೂ ಸವದತ್ತಿ ಪುಣ್ಯಭೂಮಿಗೂ ಅವಿನಾಭಾವ ಸಂಬಂಧವಿತ್ತು. ಈ ಭಾಗದ ಜನರು ಅವರಿಗೆ ತೋರಿಸುತ್ತಿದ್ದ ಪ್ರೀತಿ, ಬೆಂಬಲ ಅಪಾರ, ಅಲ್ಲದೇ ಈ ನೆಲದ ಅಭಿವೃದ್ಧಿಗೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ನೆನಪಿನಲ್ಲಿಟ್ಟು, ನನಗೆ ಇಲ್ಲಿನ ಜನರು ತೋರುತ್ತಿರುವ ಪ್ರೀತಿ, ಗೌರವಕ್ಕೆ ನಾನು ಎಂದೆಂದಿಗೂ ಚಿರಋಣಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಚಿವರಾದ ಶ ಜಗದೀಶ್ ಶೆಟ್ಟರ್, ವಿಧಾನಸಭೆ ಉಪ ಸಭಾಪತಿಗಳಾದ ಆನಂದ ಮಾಮನಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ