Breaking News

ಜನರ ಜೀವ ಅಮೂಲ್ಯವಾದದ್ದು ಅದನ್ನು ರಕ್ಷಿಸಿಕೊಳ್ಳುವತ್ತ ಗಮನಹರಿಸಿ : ಬಾಲಚಂದ್ರ ಜಾರಕಿಹೊಳಿ


ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಎಲ್ಲ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಮೂಲಕ ಕೋವಿಡ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವುದು. ರಾಜ್ಯದ ವಿವಿಧ ಭಾಗಗಳಿಂದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಬರುವ ಹಾಗೂ ಬಂದಿರುವ ಜನರ ಮಾಹಿತಿಯನ್ನು ಕಲೆ ಹಾಕುವುದು. ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ತಪಾಸಣೆಗೊಳಪಡಿಸಿ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಮಟ್ಟದಲ್ಲಿ ಡಂಗುರ ಸಾರಿಸುವ ಮೂಲಕ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಘಣತ್ಯಾಜ್ಯ ವಾಹನಗಳ ಧ್ವನಿವರ್ಧಕಗಳ ಮೂಲಕ ಜನಜಾಗೃತಿಯನ್ನು ಮೂಡಿಸುವುದು. ಸಾರ್ವಜನಿಕರು ಅನಗತ್ಯ ಓಡಾಟ ನಡೆಸದೇ ಮನೆಯಲ್ಲಿಯೇ ಸುರಕ್ಷಿತವಾಗಿರುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಆಗಾಗ ಕೈತೊಳೆದುಕೊಳ್ಳುವುದು. 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು.

ಸೋಂಕಿತರ ಆರೈಕೆಗೆ ಬೇಕಾದ ಔಷಧಿ ಮತ್ತು ಇತರೇ ಅಗತ್ಯ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಸೋಂಕಿತರ ಸೇವೆಗಾಗಿ ಹೆಚ್ಚಿನ ಸಂಖ್ಯೆಯ ಅಂಬ್ಯುಲೆನ್ಸ್‍ಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಗೋಕಾಕ ಸಾರ್ವಜನಿಕ ಆಸ್ಪತ್ರೆ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪಿಸಲಾಗಿದ್ದು, ಇವುಗಳ ಪ್ರಯೋಜನ ಪಡೆಯುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ತಾಲೂಕಿನ ವಿವಿಧ ಪ್ರಮುಖ ಸ್ಥಳಗಳಲ್ಲಿ ಚೆಕ್ ಪೋಸ್ಟ್‍ಗಳನ್ನು ಸ್ಥಾಪಿಸುವುದು ಹಾಗೂ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮದುವೆ ಸಮಾರಂಭಗಳಲ್ಲಿ ಸರ್ಕಾರವು ನಿಗದಿಪಡಿಸಿದ ಜನಸಂಖ್ಯೆಗಿಂತ ಹೆಚ್ಚಿನ ಜನಸಂಖ್ಯೆ ಸೇರದಂತೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವುದು. ಹೋಂ ಕ್ವಾರಂಟೈನ್‍ನಲ್ಲಿರುವ ಸೋಂಕಿತರ ಆರೋಗ್ಯದ ಕುರಿತಾಗಿ ನಿರಂತರವಾಗಿ ವಿಚಾರಣೆ ನಡೆಸುವುದು.

ಲಕ್ಷಣರಹಿತ ಸೋಂಕಿತರಿಗಾಗಿ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಹೊಸದಾಗಿ ಗೋಕಾಕ ನಗರದ ಆಶ್ರಯ ಬಡಾವಣೆ ವಸತಿ ನಿಲಯ ಮತ್ತು ಎಪಿಎಂಸಿಯಲ್ಲಿರುವ ವಸತಿ ನಿಲಯ ಹಾಗೂ ಮೂಡಲಗಿ ದೇವರಾಜ ಅರಸು ವಸತಿ ನಿಲಯಗಳಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ಹಾಗೂ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕೊರೋನಾ ವಿರುದ್ಧ ಸಮರಕ್ಕಾಗಿ ಸಿದ್ಧರಾಗಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಗೋಕಾಕ ತಹಶೀಲ್ದಾರ ನವೀನ ಹುಲ್ಲೂರ, ತಾಲೂಕಾ ವೈದ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಡಿವಾಯ್‍ಎಸ್‍ಪಿ ಜಾವೇದ ಇನಾಮದಾರ, ನಗರಸಭೆ ಪೌರಾಯುಕ್ತ ಎಸ್.ಎಮ್ ಹಿರೇಮಠ, ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ್, ತಜ್ಞವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜೀತ ಮನ್ನಿಕೇರಿ, ಜಿ.ಬಿ. ಬಳಗಾರ, ಉಪತಹಶೀಲ್ದಾರರಾದ ಎಲ್.ಎಚ್. ಭೋವಿ, ಸಾಗರ ಕಟ್ಟಿಮನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆರ್.ಕೆ. ಬಿಸಿರೊಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ವ್ಹಿ. ಕಲ್ಲಪ್ಪನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ