Breaking News

ಗೋಕಾಕ ತಾಲೂಕಿಗೆ ಕೋವಿಡ್ ಸೋಂಕಿತರಿಗಾಗಿ ಆಕ್ಸಿಜನ್ ಪ್ಲಾಂಟ್ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ


ಗೋಕಾಕ: ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿಯ ಎನ್.ಎಸ್.ಎಫ್. ಅತಿಥಿಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್ ಪೋರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೊನಾ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.

ಮೂರು ಕೇಂದ್ರಗಳಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ:

“ಬಹುತೇಕ ಸೋಂಕಿತರಿಗೆ ಆಕ್ಸಿಜನ್ ಕೊರತೆ ಎದುರಾಗುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಲು ಈಗಾಗಲೇ ಗೋಕಾಕ ಸಾರ್ವಜನಿಕ ಆಸ್ಪತ್ರೆ, ಮಲ್ಲಾಪುರ ಪಿ.ಜಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಮಾಡಿರುವುದಾಗಿ ಅವರು ಹೇಳಿದರು.

ಈ ಮೂರು ಕೊವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ರಾಮಬಾಣವಾಗಿರುವ ರೆಮ್‍ಡೆಸಿವರ್ ಕೂಡ ಅಗತ್ಯವಿರುವಷ್ಟು ಲಭ್ಯ ಇವೆ. ಸೋಂಕಿತರಿಗೆ ಸದಾ ಕಾಲವೂ ಆಕ್ಸಿಜನ್ ಕೊರತೆ ಎದುರಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸೋಂಕಿತರ ಆರೈಕೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ಅವರು ಸೂಚನೆ ನೀಡಿದರು.

ಎಲ್ಲರೂ ಲಸಿಕೆ ಪಡೆಯಿರಿ:
ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಅಗತ್ಯವಿದ್ದರೇ ಮಾತ್ರ ಅಸ್ಪತ್ರೆಗಳಿಗೆ ದಾಖಲಾಗಬೇಕು. ರೋಗ ಲಕ್ಷಣಗಳು ಕಂಡು ಬಂದಿದ್ದರೂ ಅಂಥವರು ವಿಳಂಬವಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಇದರಿಂದಾಗಿಯೇ ಜೀವಹಾನಿಗಳು ಸಂಭವಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು.

ಕೋವಿಡ್ ಲಸಿಕೆಗಳನ್ನು ಇದುವರೆಗೆ ಉಭಯ ತಾಲೂಕಿನಲ್ಲಿ ಕೇವಲ ಶೇ. 38 ರಷ್ಟು ಜನರು ಹಾಕಿಸಿಕೊಂಡಿದ್ದಾರೆ. ಶೇ. 100 ರಷ್ಟು ಜನರು ಈ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು. ಸ್ಥಳೀಯ ಗ್ರಾಮ, ಪಟ್ಟಣ, ಪುರಸಭೆಯ ವ್ಯಾಪ್ತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ತಿಳುವಳಿಕೆ ಮೂಡಿಸಲು ಅಧಿಕಾರಿಗಳು ಯತ್ನಿಸಬೇಕು. ಮಹಾಮಾರಿ ಕೊರೊನಾ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗೋಕಾಕ ತಹಶೀಲ್ದಾರ್ ನವೀನ ಹುಲ್ಲೂರ, ಮೂಡಲಗಿ ತಹಶೀಲ್ದಾರ ಡಾ. ಮೋಹನ ಭಸ್ಮೆ, ಗೋಕಾಕ ಡಿವೈಎಸ್ಪಿ ಜಾವೇದ ಇನಾಂದಾರ, ತಾಲೂಕು ವೈದ್ಯಾಧಿಕಾರಿ ಡಾ ಮುತ್ತಣ್ಣ ಕೊಪ್ಪದ, ಗೋಕಾಕ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಆಂಟಿನ್, ಹಿರಿಯ ವೈದ್ಯ ಡಾ.ಆರ್.ಎಸ್. ಬೆಣಚಿನಮರ್ಡಿ, ಗೋಕಾಕ ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಮೂಡಲಗಿ ಬಿಇಓ ಅಜಿತ ಮನ್ನಿಕೇರಿ, ಸಿಪಿಐಗಳಾದ ಗೋಪಾಲ ರಾಠೋಡ, ಶ್ರೀಶೈಲ ಬ್ಯಾಕೋಡ, ಸತೀಶ ಕಣ್ಣೇಶ್ವರ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಸಿಡಿಪಿಓ ವೈ. ಎಂ. ಗುಜನಟ್ಟಿ, ಬಿಸಿಎಂ ಅಧಿಕಾರಿ ಆರ್.ಕೆ. ಬಿಸಿರೊಟ್ಟಿ ಸೇರಿದಂತೆ ಹಲವು ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ