ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
“ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ.
“ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, ವಿಚಾರ ಸಂಕಿರಣ ಸೇರಿದಂತೆ ಎಲ್ಲ ರೀತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿ, ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದರು. ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ್ದರು. ಅವರ ನಿಧನದಿಂದ ತುಂಬಾ ನೋವಾಗಿದೆ” ಎಂದು ಸತೀಶ ಸಂತಾಪ ಸೂಚಿಸಿದ್ದಾರೆ.