ಬೆಳಗಾವಿ: ಕೊರೊನಾ ನಿಯಂತ್ರಣ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿ ಜೂ.12 ರಿಂದ ಜೂ.14 ರ ಬೆಳಗ್ಗೆ 6:00 ಗಂಟೆಯ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.
ಜೂ. 12ರ ಬೆಳಿಗ್ಗೆ 6 ಗಂಟೆಯಿಂದ 14 ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು ದಿನಗಳವೆರೆಗ ಜಿಲ್ಲೆಯಾಧ್ಯಂತ ಸಂಪೂರ್ಣ ಲಾಕ್ ಡೌನ್ ಇರಲಿದೆ.
ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ವೀಕೆಂಡ್ ನಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತಿದ್ದು, ಈ ವಾರವೂ ಕೂಡ ಲಾಕ್ ಡೌನ್ ಎರಡು ದಿನ ಲಾಕ್ ಡೌನ್ ಘೋಷಿಸಲಾಗಿದೆ.
ಅಗತ್ಯ ಸೇವೆಗಳಿಗೆ ವಿನಾಯಿತಿ:
ಆಸ್ಪತ್ರೆ ಹಾಗೂ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಲು, ಔಷಧಿ ಪೂರೈಕೆಗೆ ಅವಕಾಶವಿದೆ. ಆನ್ ಲೈನ್ ಫುಡ್ ಸರ್ವೀಸ್ ಗೂ ಅನುಮತಿ ನೀಡಲಾಗಿದೆ.
ಸರ್ಕಾರಿ ಅಧಿಕಾರಿಗಳಿಗೆ ಸಭೆಗೆ ಹಾಜರಾಗಲು ಮಾತ್ರ ಅವಕಾಶವಿದೆ. ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 10 ಗಂಟೆಯವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ರೈತ ಸಂಪರ್ಕ ಕೇಂದ್ರಗಳು 12 ಗಂಟೆಯವರೆಗೆ ಬೀಜ, ರಸಗೊಬ್ಬರ ವಿತರಿಸಬಹುದು. ಪೂರ್ವಾನುಮತಿ ಪಡೆದ ಮದುವೆ ಸಮಾರಂಭಗಳಿಗೆ ಅವಕಾಶ ಕಲ್ಪಿಸಲಾಗಿದೆ.