
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ 2.0 ವಿಸ್ತರ್ಣೆಯಾಗಿದೆ. ಇಂತಹ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಶೋಭಾ ಕರಂದ್ಲಾಜೆ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೇಂದ್ರ ಸಚಿವ ಸಂಪುಟವು ಪುನಾರಚನೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ 43 ಸಚಿವರು ಸೇರ್ಪಡೆಗೊಳ್ಳುತ್ತಿದ್ದಾರೆ. ಇಂತಹ ಮೋದಿ ನೇತೃತ್ವದ ಸಚಿವ ಸಂಪುಟಕ್ಕೆ ಕರ್ನಾಟಕದಿಂದ ಸಂಸದ ರಾಜೀವ್ ಚಂದ್ರಶೇಖರ್ ಅವರಿಗೂ ಸ್ಥಾನದೊರೆತಿದೆ. ನೂತನ ಕೇಂದ್ರ ಸಚಿವರಾಗಿ ರಾಜೀವ್ ಚಂದ್ರಶೇಖರ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅಂದಹಾಗೇ, ಪ್ರಕಾಶ್ ಜಾವಡೇಕರ್ ಮತ್ತು ರವಿಶಂಕರ್ ಪ್ರಸಾದ್ ರಾಜೀನಾಮೆಯಿಂದ ಈವರೆಗೆ ಒಟ್ಟು 12 ಸಚಿವರು ಮೋದಿ ಸಂಪುಟದಿಂದ ನಿರ್ಗಮಿಸಿದ್ದಾರೆ.
ಆರೋಗ್ಯ ಕಾರಣಗಳಿಂದಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಇಷ್ಟವಿಲ್ಲ ಎಂದು ವ್ಯಕ್ತಪಡಿಸಿದರು. ಅವರು ಇನ್ನು ಮುಂದೆ ಸಂಪುಟದ ಭಾಗವಾಗಿರುವುದಿಲ್ಲ. ಅಲ್ಲದೆ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಬುಧವಾರ ಕೇಂದ್ರ ಸಚಿವ ಸಂಪುಟದಿಂದ ನಿರ್ಗಮಿಸಿದರು
CKNEWSKANNADA / BRASTACHARDARSHAN CK NEWS KANNADA