ಬೆಂಗಳೂರು : ವಾಯಭಾರ ಕುಸಿತದ ಹಿನ್ನೆಲೆ ಜುಲೈ 8 ರಿಂದ 11ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು ಜುಲೈ 8 ಹಾಗೂ 9ರಂದು ರಾಜ್ಯಾದ್ಯಂತ ಮಳೆ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಜುಲೈ 8ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. . ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಜುಲೈ 8ರಂದು ಸಾಧಾರಣದಿಂದ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.
ಬೀದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 8 ಮತ್ತು 9 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಉತ್ತರ ಭಾರತದಲ್ಲಿ ನೈರುತ್ಯ ಮಾನ್ಸೂನ್ ಪ್ರಗತಿ ಸ್ಥಗಿತಗೊಂಡ ನಂತ್ರ ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ (ಜುಲೈ 8) ಮಳೆಯಾಗುವ ಮುನ್ಸೂಚನೆ ನೀಡಿದೆ.