ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ.
ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲಾಡಳಿತ ಎಚ್ಚರಿಕೆಯನ್ನ ನೀಡ್ತಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುವ ಮಳೆಯಿಂದ ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹ ಉಂಟಾಗಿ ಅಪಾರ ಹಾನಿ ಸೃಷ್ಟಿಸುತ್ತದೆ. ಪ್ರತಿ ಬಾರಿ ಪ್ರವಾಹ ಬಂದಾಗ ಎಚ್ಚೆತ್ತುಕೊಳ್ಳುತ್ತಿದ್ದ ಅಧಿಕಾರಿಗಳು, ಈಗ ಪ್ರವಾಹ ಮುನ್ನವೇ ಡಂಗುರ ಸಾರಿ ಎಚ್ಚರಿಕೆ ನೀಡಿದ್ದಾರೆ.