ಬೆಂಗಳೂರು : ನಗರದ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇದರಿಂದಾಗಿ ಕಾರ್ಖಾನೆಯ ಮೊದಲ ಮಹಡಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ.
ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ಇರುವಂತ ಡೈಸಿ ಡೀಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದಾಗಿ, ಕಾರ್ಖಾನೆಯ ಇತರೆ ಭಾಗಕ್ಕೂ ವ್ಯಾಪಿಸಿದ ಪರಿಣಾಮ, ಧಗಧಗಿಸಿ ಹೊತ್ತಿ ಉರಿಯುತ್ತಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಆಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇದೀಗ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದ್ದು, ಬೆಂಕಿ ಹತೋಟಿಗೆ ಬರಲಾಗಿದೆ ಎನ್ನಲಾಗಿದೆ.
ಕೋಣನಕುಂಟೆ ಕ್ರಾಸ್ ನ ಡೈಸಿ ಡೀಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸೋದಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದು ಬಂದಿದೆ.