Breaking News

ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಿಎಂ ಸ್ಥಾನ ಸಿಕ್ಕೇ ಸಿಗುತ್ತದೆ : ಉಮೇಶ್ ಕತ್ತಿ.


ಧಾರವಾಡ: ಬಿಜೆಪಿ ಪಾಳೆಯದಲ್ಲಿ ಸಿಎಂ ಬದಲಾವಣೆ ವಿಚಾರ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸಚಿವ ಉಮೇಶ ಕತ್ತಿ ಕೂಡ ಇದೀಗ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ನಾನೂ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೆ ಇದೆ. ಯಾವುದೇ ಕಪ್ಪು ಚುಕ್ಕೆ ನನಗಿಲ್ಲ. ಮುಖ್ಯಮಂತ್ರಿಯಾಗಲು ಆಸೆ ನನಗೂ ಇದ್ದೇ ಇದೆ ಎಂದಿದ್ದಾರೆ.

ಸಿಎಂ ಬಳಿಕ ಪ್ರಧಾನಮಂತ್ರಿ ಆಗುವ ಆಸೆ ಇದ್ದೇ ಇರುತ್ತದೆ.ಉತ್ತರ ಕರ್ನಾಟಕಕ್ಕೆ ಅನ್ಯಾಯ ಆದರೆ, ನಾನು ಉತ್ತರ ಕರ್ನಾಟಕದ ಜನರನ್ನು ಎಬ್ಬಿಸಬೇಕಾಗುತ್ತದೆ. ಈ ಭಾಗಕ್ಕೆ ಅನ್ಯಾಯ ಆದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕವಾಗಿ ಕಟ್ಟಬೇಕಾಗುತ್ತದೆ. ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಿಎಂ ಸ್ಥಾನ ಸಿಕ್ಕೇ ಸಿಗುತ್ತದೆ ಎಂದರು.

ಸಿದ್ದರಾಮಯ್ಯನವರ ಸರ್ಕಾರ 10% ಸರ್ಕಾರ ಎಂದು ರಾಜ್ಯದ ಜನರ ಮಾತನಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಹಾಗೆ ನಡೆದಿದ್ದರೆ ಕಾಂಗ್ರೆಸ್‌ ನವರು ಕೋರ್ಟ್‌ಗೆ ಹೋಗಲಿ ಎಂದ ಅವರು, ಶಾಸಕ ಅರವಿಂದ ಬೆಲ್ಲದ ಸಿಎಂ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲ್ಲದ ಯಾಕೆ ಸಿಎಂ ಆಗಬಾರದು? ನಾನೂ ಸಿಎಂ ಆಗಬಹುದು, ಬೆಲ್ಲದ ಅವರೂ ಸಿಎಂ ಆಗಬಹುದು ನಿರಾಣಿ ಅವರೂ ಸಿಎಂ ಆಗಬಹುದು ಎಂದು ಹೊಸ ಬಾಂಬ್ ಸಿಡಿಸಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಕೊರೊನಾ ಹೆಚ್ಚಾದ್ರೆ ಕಾಲೇಜು ಬಂದ್ ಅನಿವಾರ್ಯ: ಕೆ. ಸುಧಾಕರ್

ಧಾರವಾಡ : ಕಾಲೇಜು ಆರಂಭವಾದ ದಿನದಿಂದ 120 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ