ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಟ್ಟು, ಇದೀಗ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬೆನ್ನಲ್ಲೇ ಇದೀಗ ರಾಜ್ಯದ ಮತ್ತೋರ್ವ ಖಡಕ್ ಐಪಿಎಸ್ ಅಧಿಕಾರಿ ಕೂಡ ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್, ಅಣ್ಣಾಮಲೈ ರೀತಿಯಲ್ಲೇ ಪಾಲಿಟಿಕ್ಸ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ವಿವಿಧ ಮಠಗಳಿಗೆ ಭೇಟಿ ನೀಡುತ್ತಿರುವ ರವಿ ಡಿ ಚೆನ್ನಣ್ಣನವರ್, ಹಲವು ಸ್ವಾಮೀಜಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವುದು ಈ ಸುದ್ದಿಗೆ ಪುಷ್ಠಿ ನೀಡುವಂತಿದೆ.
ಚಿತ್ರದುರ್ಗದ ಬಸವ ಮಹಾಸ್ವಾಮೀಜಿ, ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಶ್ರೀ, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವ ರವಿ ಡಿ ಚೆನ್ನಣ್ಣನವರ್, ರಾಜಕೀಯ ಎಂಟ್ರಿ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಅಲ್ಲದೇ ಮುಂಬರುವ ಚುನಾವಣೆಯಲ್ಲಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆಯೂ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಖಡಕ್ ಐಪಿಎಸ್ ಅಧಿಕಾರಿ ಚೆನ್ನಣ್ಣನವರ್ ಮಠಗಳ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
CKNEWSKANNADA / BRASTACHARDARSHAN CK NEWS KANNADA