ಬೆಂಗಳೂರು: ನಗರದ ಕರ್ನಾಟಕ ಲಿಂಗಾಯತ ಎಜುಕೇಷನ್ ಸೊಸೈಟಿ(KLE) ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ರಾಜಾಜಿನಗರದ ಸೆಕೆಂಡ್ ಬ್ಲಾಕ್ನಲ್ಲಿರುವ ಕೆಎಲ್ಇ ಕಾಲೇಜಿನ ಸಿಬ್ಬಂದಿಯನ್ನು ಆಡಳಿತ ಮಂಡಳಿ ಏಕಾಏಕಿ ಕೆಲಸದಿಂದ ವಜಾಗೊಳಿಸಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಕೆಲಸದಿಂದ ತೆಗೆದು ಹಾಕಿರುವುದನ್ನು ವಿರೋಧಿಸಿ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿಗಳು ಕೂಡ ಪ್ರತಿಭಟನೆ ಸಾಥ್ ನೀಡಿದ್ದಾರೆ.