ಗದಗ: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಗದಗ -ಬೆಟಗೇರಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಅವರು ಸಿಕ್ಕಿಬಿದ್ದಿದ್ದಾರೆ.
ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನಿಗೆ ಅನುದಾನ ಬಿಡುಗಡೆ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಅಬ್ದುಲ್ ಸಲಾಂ ಮನಿಯಾರ್ ಎಂಬುವವರು ಎಸಿಬಿ ಅಧಿಕಾರಿಳಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಎಸಿಬಿ ಧಾರವಾಡ ಹಾಗೂ ಗದಗ ಪ್ರಭಾರಿ ಡಿವೈಎಸ್ಪಿ ವೇಣುಗೋಪಾಲ ನೇತೃತ್ವದಲ್ಲಿ ದಾಳಿ ನಡೆಸಿದ್ದು, ರೆಡ್ ಹ್ಯಾಂಡ್‌ಆಗಿ ಕಾರ್ಯನಿರ್ವಾಹಕ ಅಭಿಯಂತರರನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಎಸಿಬಿ ಸಿಪಿಐ ಆರ್.ಎಫ್.ದೇಸಾಯಿ ಹಾಗೂ ಸಿಬ್ಬಂದಿಗಳಾದ ವೀರೇಶ್ ಮತ್ತಿತರರು ಪಾಲ್ಗೊಂಡಿದ್ದರು.
CKNEWSKANNADA / BRASTACHARDARSHAN CK NEWS KANNADA