Breaking News

ಪದವಿ ಕಾಲೇಜುಗಳ ಆರಂಭದ ಕುರಿತು ನೂತನ ಮಾರ್ಗಸೂಚಿ ಪ್ರಕಟ!


ನವದೆಹಲಿ : ಪದವಿ ಕಾಲೇಜುಗಳ ಆರಂಭದ ಕುರಿತಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಕ್ಟೋಬರ್ 1 ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಸೂಚನೆ ನೀಡಿದೆ.

ಯುಜಿಸಿ ಮಾರ್ಗಸೂಚಿ ಪ್ರಕಾರ, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷ / ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ ಲೈನ್, ಆಫ್ ಲೈನ್ ಅಥವಾ ಬ್ಲೆಂಡ್ ಮಾಡಿದ ಮೋಡ್ ನಲ್ಲಿ ಆಗಸ್ಟ್ 31 ರೊಳಗೆ ಪೂರ್ಣಗೊಳಿಸಬೇಕು. ಇದಲ್ಲದೆ, ಆಂತರಿಕ ಮೌಲ್ಯಮಾಪನ ಮತ್ತು ಹಿಂದಿನ ಸೆಮಿಸ್ಟರ್ ಪರೀಕ್ಷೆಗಳ ಆಧಾರದ ಮೇಲೆ ಇಂಟರ್ ಮೀಡಿಯೇಟ್ ಸೆಮಿಸ್ಟರ್ /ವರ್ಷದ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ.

ಈ ನಿರ್ಧಾರವು 2020 ರಲ್ಲಿ ಅನುಸರಿಸಿದ ನಿಯಮಗಳಿಗೆ ಅನುಗುಣವಾಗಿದೆ ಎಂದು ತಿಳಿಸಿದೆ.

ಹೊಸ ಪ್ರವೇಶಗಳಿಗೆ ಸಂಬಂಧಿಸಿದಂತೆ, ಯುಜಿಸಿ ಎಲ್ಲಾ ಸಂಸ್ಥೆಗಳಿಗೆ ಸೆಪ್ಟೆಂಬರ್ 30 ರೊಳಗೆ ಮೊದಲ ವರ್ಷದ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಮುಗಿಸುವಂತೆ ಹೇಳಿದೆ.

ಉನ್ನತ ಶಿಕ್ಷಣ ಸಂಸ್ಥೆಗಳು 2021-2022 ರ ಶೈಕ್ಷಣಿಕ ಅಧಿವೇಶನದ ಪದವಿಪೂರ್ವ ಕೋರ್ಸ್ ಗಳು / ಕಾರ್ಯಕ್ರಮಗಳ ಪ್ರವೇಶ ಪ್ರಕ್ರಿಯೆಯು ಸಿಬಿಎಸ್ ಇ, ಐಸಿಎಸ್‌ಇ ಮತ್ತು ರಾಜ್ಯ ಮಂಡಳಿಗಳ ಫಲಿತಾಂಶಗಳ ಘೋಷಣೆಯ ನಂತರವೇ ಪ್ರಾರಂಭವಾಗುತ್ತದೆ ಎಂದು ಖಚಿತಪಡಿಸಿಕೊಳ್ಳಬೇಕು. ಎಲ್ಲಾ ಶಾಲಾ ಮಂಡಳಿಗಳು ಜುಲೈ 31 ರೊಳಗೆ ತರಗತಿ/ಗ್ರೇಡ್-12 ಪರೀಕ್ಷೆಗಳಿಗೆ ತಮ್ಮ ಫಲಿತಾಂಶಗಳನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ಯುಜಿಸಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮೊದಲ ಸೆಮಿಸ್ಟರ್ / ವರ್ಷದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷಅಕ್ಟೋಬರ್ 1 ರಿಂದ ಪ್ರಾರಂಭವಾಗಲಿದೆ. ಅರ್ಹತಾ ಪರೀಕ್ಷೆಗಳ ಸಂಬಂಧಿತ ದಾಖಲೆಗಳನ್ನು ಡಿಸೆಂಬರ್ 31 ರವರೆಗೆ ಸ್ವೀಕರಿಸಬಹುದು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ