ಕಲಬುರ್ಗಿ; ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಪಿಎಸ್‌ಐ ನಾಡಗೌಡ ಪಾಟೀಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 47 ಜಾನುವಾರುಗಳನ್ನು ಸೇಡಂ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಹೀಗೆ ವಶಕ್ಕೆ ಪಡೆಯಲಾಗಿದ್ದ ಜಾನುವಾರುಗಳನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ನಂದಿ ಅನಿಮಲ್ ವೆಲ್ಫೇರ್ ಸೊಸೈಟಿ ಹುಣಚಿರಾಯ್ ಮೋಟಗಿ ಅವರ ಗೋಶಾಲೆಗೆ ನೀಡಲಾಗಿತ್ತು. ಹೀಗೆ ನೀಡಿದ್ದ ಜಾನುವಾರುಗಳಲ್ಲಿ ಒಂದು ಜಾನುವಾರು ಮೃತಪಟ್ಟಿತ್ತು. ಇದೇ ವಿಚಾರವಾಗಿ ಪಿಎಸ್‌ಐ ನಾಡಗೌಡ, ಹುಣಚಿರಾಯ್ ಮೋಟಗಿಯವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಈ ಕುರಿತು ಹುಣಚಿರಾಯ್ ಕಲಬುರ್ಗಿ ಪೊಲೀಸ್ ಠಾಣೆಯಲ್ಲಿ ನಾಡಗೌಡ ವಿರುದ್ಧ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.
CKNEWSKANNADA / BRASTACHARDARSHAN CK NEWS KANNADA