Breaking News

ರಸ್ತೆಯಲ್ಲಿ ಗುಂಡಿ ತಗ್ಗುಗಳ ಮಹಾಪುರ; ಕಣ್ಣ್ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು.


ಬೀದರ್ : ಅವಳಿ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಜನರು ಸಂಚರಿಸಲು ಹರಸಾಹಸ ಪಡಬೇಕಾಗಿದೆ. ಗದಗ-ಬೆಟಗೇರಿಯ ಜನ ಜೀವ ಅಂಗೈಯಲ್ಲಿ ಹಿಡಿದು ಪ್ರತಿನಿತ್ಯ ಸಂಚಾರ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಸರ್ಕಲ್, ಪಂಡಿತ ಪುಟ್ಟರಾಜ ಗವಾಯಿಗಳ ಸರ್ಕಲ್, ಬೆಟಗೇರಿಯ ರೈಲ್ವೆ ಬ್ರಿಡ್ಜ್ ರಸ್ತೆ, ಮುಳಗುಂದ ನಾಕಾ, ಮುಳಗುಂದ ರಸ್ತೆ ಸೇರಿದಂತೆ ಅವಳಿ ನಗರದ ಪ್ರಮುಖ ರಸ್ತೆಯಲ್ಲಿ ತಗ್ಗು ಗುಂಡಿಗಳು ರಾರಾಜಿಸುತ್ತಿವೆ. ಅದರಲ್ಲೂ ಮಳೆಯಾದರೆ ಸಾಕು ರಸ್ತೆಯಲ್ಲಿ ತಗ್ಗು ಗುಂಡಿಗಳು ನೀರಿನಿಂದ ತುಂಬಿಕೊಂಡು, ವಾಹನ ಸವಾರರು ಅಪಾಯಕ್ಕೆ ಸಿಲುಕುತ್ತಿದ್ದಾರೆ. ಈ ಅವ್ಯವಸ್ಥೆ ಸಹಜವಾಗಿಯೇ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನೀರು ತುಂಬಿರುವುದರಿಂದ ತಗ್ಗು ಗುಂಡಿಗಳ ಆಳ ಗೊತ್ತಾಗದೆ ಅದೆಷ್ಟು ಬೈಕ್ ಸವಾರರು ಬಿದ್ದು, ಗಾಯ ಮಾಡಿಕೊಂಡಿದ್ದಾರೆ.

ಆಟೋ ಚಾಲಕರು ಆಟೋ ಓಡಿಸಲು ಭಯ ಪಡುತ್ತಿದ್ದು, ಗರ್ಭಿಣಿ ಮಹಿಳೆಯರನ್ನು ಈ ರಸ್ತೆಗಳಲ್ಲಿ ಕರೆದುಕೊಂಡು ಬಂದರೆ, ಅಲ್ಲಿಯೇ ಹೆರಿಗೆ ಆಗುತ್ತದೆ ಎಂದು ಸ್ಥಳೀಯರಾದ ಗೋವಿಂದ ಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರು ವರ್ಷಗಳಿಂದ ನಗರಸಭೆಗೆ ಸದಸ್ಯರಿಲ್ಲ. ಹೀಗಾಗಿ ಇಲ್ಲಿನ ಅಧಿಕಾರಿಗಳಿಗೆ ಹೇಳುವವರು, ಕೇಳುವವರು ಯಾರೂ ಇಲ್ಲ. ಅಭಿವೃದ್ಧಿ ಎನ್ನುವುದು ಮರಿಚೀಕೆಯಾಗಿದೆ. ಜಿಲ್ಲಾಡಳಿತ ಹಾಗೂ ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳು ರಸ್ತೆ ರಿಪೇರಿ ಮಾಡಬೇಕಿತ್ತು. ಆದರೆ ಅವರ ಬೇಜವಾಬ್ದಾರಿಯಿಂದ ಅವಳಿ ನಗರದ ರಸ್ತೆಯಲ್ಲಿ ಸಂಚಾರ ಮಾಡದಂತ ಸ್ಥಿತಿ ನಿರ್ಮಾಣವಾಗಿದೆ. ನಗರ ಪ್ರದೇಶದ ರಸ್ತೆಗಳ ಸ್ಥಿತಿಯೇ ಹೀಗಾದರೆ, ಗ್ರಾಮೀಣ ಭಾಗದ ರಸ್ತೆಗಳು ಹೇಗೆ ಇರಬಹುದು. ಗದಗ ಶಾಸಕ ಎಚ್. ಕೆ. ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಸಿ. ಪಾಟೀಲ್ ಒಂದು ಸುತ್ತು ಈ ರಸ್ತೆಗಳಲ್ಲಿ ಸುತ್ತಾಡಲಿ ಆಗ ಇಲ್ಲಿನ ಪರಿಸ್ಥಿತಿ ಅವರಿಗೆ ಅರ್ಥವಾಗುತ್ತದೆ. ಕೂಡಲೇ ಗದಗ- ಬೆಟಗೇರಿ ನಗರ ಸಭೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ತಗ್ಗು ಗುಂಡಿಗಳನ್ನು ತುಂಬಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗದಗ ನಿವಾಸಿ ಆನಂದ ಒತ್ತಾಯ ಮಾಡಿದ್ದಾರೆ.

ಒಟ್ಟಾರೆ ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ರಸ್ತೆಯಲ್ಲಿ ಸಂಚಾರ ಮಾಡಲು ಜನರು ಭಯಪಡುತ್ತಿದ್ದಾರೆ. ಇನಾದರೂ, ಜಿಲ್ಲಾಧಿಕಾರಿಗಳು, ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ತಗ್ಗು ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ