ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಡಿಪೋದ ಕೆಎಸ್ಆರ್ಟಿಸಿ ಟ್ರಾಫಿಕ್ ಕಂಟ್ರೋಲರ್ನ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟ್ರಾಫಿಕ್ ಕಂಟ್ರೋಲರ್ ಬಿ.ಎಸ್.ವೆಂಕಟಾಚಲಪತಿ ಸ್ವಯಂ ನಿವೃತ್ತಿ ಪ್ರಮಾಣ ಪತ್ರ ನೀಡಲು ಸುಮಾರು 50.000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಡ್ರೈವರ್ ಕಂ ಕಂಡಕ್ಟರ್ ಜಿ.ಎನ್.ವೆಂಕಟಾಚಲಪತಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 50.000 ರೂ. ನಲ್ಲಿ ಇಂದು (ಜುಲೈ 21) 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಿ.ಎಸ್.ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕೋಲಾರದ ಎಸಿಬಿ ಅಧಿಕಾರಿಗಳು ಬಿ.ಎಸ್.ವೆಂಕಟಾಚಲಪತಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಂತಾಮಣಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಕಂಟ್ರೋಲರ್ನ ವಶಕ್ಕೆ ಪಡೆಯಲಾಗಿದ್ದು, ಕೋಲಾರ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
ಹೀಗಾಗಿ ವಿಭಾಗೀಯ ನಿಯಂತ್ರಣಾಧಿಕಾರಿಯನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಹೋಮ್ ನರ್ಸಿಂಗ್ ಬಂಧನ
ಮೈಸೂರು: ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಆರೋಪಿ ಮೀನಾಕ್ಷಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 4 ಚಿನ್ನದ ಸರ ಮತ್ತು 2,50,000 ಮೌಲ್ಯದ 60 ಗ್ರಾಂ ಚಿನ್ನದ ಬಳೆಗಳನ್ನು ಕಳ್ಳತನ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.