ಮಾರ್ಕಂಡೇಯ ನದಿ ನೀರಿನ ಹರಿವು ವೀಕ್ಷಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಹುಕ್ಕೇರಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ತಾಲೂಕಿನ ಪಾಶ್ಚಾಪುರ ಪಟ್ಟಣದ ಪಕ್ಕದಲ್ಲಿ ಹರಿಯುವ ಮಾರ್ಕಂಡೇಯ ನದಿಯ ನೀರಿನ ಹರಿವನ್ನು ವೀಕ್ಷಿಸಿದರು.
ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯ ನಡುವೆ, ತಾವೇ ಛತ್ರಿ ಹಿಡಿದುಕೊಂಡು ಬಂದ ರಾಹುಲ್ ಅವರು, ನದಿಯ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.
ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಹೊಲ-ಗದ್ದೆಗಳಿಗೆ ತೆರಳುವ ರೈತರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ನದಿಯ ನೀರಿನಿಂದ ಜನ, ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಹುಲ್ ಅವರು ತಿಳಿಸಿದರು.
CKNEWSKANNADA / BRASTACHARDARSHAN CK NEWS KANNADA