Breaking News

ನೈಟ್ ಕರ್ಫ್ಯೂ ಜಾರಿ, ರಸ್ತೆಗೆ ಬರೋ ಮುನ್ನ ಎಚ್ಚರ!


ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ.

ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ ಇಂದು (ಮಂಗಳವಾರ- ಜುಲೈ 3) ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಇಷ್ಟು ದಿನಗಳ ಕಾಲ ನೈಟ್ ಕರ್ಫ್ಯೂ ಇದ್ದರೂ ಸರಿಯಾಗಿ ಪಾಲನೆ ಆಗುತ್ತಿರಲಿಲ್ಲ.

ಆದ್ದರಿಂದ ಅನಗತ್ಯವಾಗಿ ಓಡಾಡಿದರೆ, ರಸ್ತೆಗಿಳಿದರೆ ದಂಡ ಪ್ರಯೋಗ ಮಾಡಲಾಗುತ್ತದೆ. ಜತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್‌ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಯಾರಿಗೆ ಯಾವುದಕ್ಕೆ ವಿನಾಯಿತಿ?

* ರೋಗಿಗಳನ್ನ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ
* ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು ಪಾಸ್ ಹೊಂದಿರಬೇಕು
* ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸಸ್ ವರ್ಕರ್ಸ್ ಐಡಿಕಾರ್ಡ್ ಹೊಂದಿರಬೇಕು
* ಮೆಡಿಕಲ್ ಎಮರ್ಜೆನ್ಸಿ ಹಾಗೂ ಅಗತ್ಯ ಸರಬರಾಜುವಾಹನಗಳಿಗೆ ಅವಕಾಶ
* ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ
* ಏರ್​ಪೋರ್ಟ್​, ರೈಲ್ವೆ ಸೇರಿದಂತೆ ಓಡಾಟಕ್ಕೆ ಸೂಕ್ತ ಮಾಹಿತಿ‌ ಒದಗಿಸಬೇಕು.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಝಣ ಝಣ ಕಾಂಚಾಣ… ಉಪತಹಸೀಲ್ದಾರ್ ಎಸಿಬಿ ಬಲೆಗೆ!

ಬೆಂಗಳೂರು : ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸಿಬಿ ಲಂಚಬಾಕ ಅಧಿಕಾರಿಯನ್ನು ಬಲೆಗೆ ಕೆಡವಿದೆ. ಜಿಲ್ಲಾಧಿಕಾರಿ ಮಂಜುನಾಥ್ ಜೊತೆಯಲ್ಲಿ ಕರ್ತ್ಯವ್ಯವನ್ನು ನಿರ್ವಹಿಸುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ