Breaking News

*ಸಚಿವ ಸಂಪುಟ ರಚನೆ; ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಿಗೆ ಅನ್ಯಾಯ*


ಮತ್ತೆ ಬಂಡಾಯ ಬಾವುಟ ಹಾರುತ್ತಾ?

ಬೆಳಗಾವಿ: ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ಪ್ರಸ್ತುತ 13 ಮಂದಿ ಬಿಜೆಪಿ ಶಾಸಕರಿದ್ದಾರೆ. ಅವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವ ಭಾಗ್ಯ ಸಿಕ್ಕಿರುವುದು ಇಬ್ಬರಿಗೆ ಮಾತ್ರ.

ಹಿರಿಯ ಶಾಸಕ ಹುಕ್ಕೇರಿಯ ಉಮೇಶ ಕತ್ತಿ ಹಾಗೂ ನಿಪ್ಪಾಣಿ ಕ್ಷೇತ್ರದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಶಿಕಲಾ ಜೊಲ್ಲೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಸ್ಥಾನಗಳೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಾಲಾಗಿವೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಭಾಗದವರಿಗೆ ಅವಕಾಶ ದೊರೆತಿಲ್ಲ. ಅದರಲ್ಲೂ ವೀರಶೈವ ಲಿಂಗಾಯತ ಸಮಾಜದವರಿಗೆ ಪ್ರಾಧಾನ್ಯತೆ ದೊರೆತಿದೆ. ಇದು ಇಲ್ಲಿನ ಸಚಿವಾಕಾಂಕ್ಷಿಗಳಾಗಿದ್ದ ಇತರ ಶಾಸಕರು ಮತ್ತು ಅವರ ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ

ಐವರಿಗೆ ಸ್ಥಾನ ಸಿಕ್ಕಿತ್ತು:

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ 5 ಸ್ಥಾನಗಳು ಬೆಳಗಾವಿಗೆ ಸಿಕ್ಕಿದ್ದವು. ರಮೇಶ್ ಜಾರಕಿಹೊಳಿ ಲಕ್ಷ್ಮಣ ಸವದಿ, ಉಮೇಶ ಕತ್ತಿ, ಶ್ರೀಮಂತ ಪಾಟೀಲ ಮತ್ತು ಶಶಿಕಲಾ ಜೊಲ್ಲೆ ಸಚಿವರಾಗಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರದವರಿಗೆ ಸಚಿವ ಸ್ಥಾನ ನೀಡಿಲ್ಲ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬರುವ ಪ್ರಮುಖ ನಾಯಕರಿಗೆ ಸಚಿವ ಸ್ಥಾನ ನೀಡಿಲ್ಲ, ಕಳೆದ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದವರನ್ನು ಮರೆತು ಬಿಟ್ರಾ ಹೈಕಮಾಂಡ ಎಂದು ಬೆಳಗಾವಿ ಮಂದಿ ಮಾತಾಗಿದೆ.

ಮೊಟ್ಟೆ ಖರೀದಿ ಹಗರಣ ಆರೋಪದವರಿಗೆ ಮಣೆ:

ಜೊಲ್ಲೆ ದಂಪತಿ ಮೂಲ ಬಿಜೆಪಿಗರು ಪಕ್ಷದ ಹೈಕಮಾಂಡ್ ಜೊತೆಗೂ ಉತ್ತಮ ಸಂಬಂಧ ಹೊಂದಿದ್ದಾರೆ. ಹಲವು ದಿನಗಳಿಂದ ದೆಹಲಿಯಲ್ಲೇ ಇದ್ದುಕೊಂಡು ಲಾಬಿ ನಡೆಸಿದ್ದರು. ಹೀಗಾಗಿ, ಶಶಿಕಲಾ ಜೊಲ್ಲೆ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ‘ಮೊಟ್ಟೆ ಖರೀದಿ ಹಗರಣ’ದ ಆರೋಪ ಕೇಳಿಬಂದಿದ್ದರಿಂದ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಅನುಮಾನ ಎಂದು ಹೇಳಲಾಗಿತ್ತು. ಆದರೆ, ಆ ಆರೋಪಗಳಿಗೆ ಹೈಕಮಾಂಡ್ ಮಣೆ ಹಾಕಿಲ್ಲದಿರುವುದು ಸ್ಪಷ್ಟವಾಗಿದೆ. ಜೊತೆಗೆ, ಕುಟುಂಬ ರಾಜಕಾರಣಕ್ಕೂ ಜೈ ಎಂದಿದೆ ಎನ್ನಲಾಗುತ್ತಿದೆ.

ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದ ಶ್ರೀಮಂತ ಪಾಟೀಲ ಖಾತೆ ನಿರ್ವಹಣೆಯಲ್ಲಿ ತಮ್ಮ ಕಳಪೆ ಸಾಧನೆಯಿಂದಾಗಿ ಸ್ಥಾನ ಕಳೆದುಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆರ್‌ಎಸ್‌ಎಸ್‌ ಜೊತೆಗೂ ನಂಟು ಹೊಂದಿರುವ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂಬ ಲೆಕ್ಕಾಚಾರವೂ ಹುಸಿಯಾಗಿದೆ.

ಬೆಳಗಾವಿಯಿಂದಲೇ ಬಂಡಾಯ ಪಕ್ಕಾ?

ಸವದತ್ತಿ-ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿದ್ದಾರೆ. ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿಯೂ ಪ್ರಕಟಿಸಿದ್ದಾರೆ. ರಾಯಬಾಗದ ದುರ್ಯೋಧನ ಐಹೊಳೆ ಕೂಡ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಹೈಕಮಾಂಡ್ ಪರಿಗಣಿಸಿಲ್ಲ.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ