Breaking News

ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್


ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ.

ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಫ್ಲಾಟ್ ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಆದಾಯ ವಿವರ, ಹೂಡಿಕೆ, ಸಂಪಾದನೆ, ಆಸ್ತಿ ಮೊದಲಾದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಾಯಕತ್ವ ಬದಲಾವಣೆ ವಿಚಾರ;ಸಿಎಂ ಮೌನ ಮುರಿದು ಟ್ವೀಟ ಮಾಡಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ, ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ