ಬೆಂಗಳೂರು : ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಮಳೆಹಾನಿ, ಬೆಳೆಹಾನಿ, ಮೂಲಸೌಕರ್ಯಗಳಿಗೆ ಹಾನಿ, ಜೀವ ಹಾನಿ ಉಂಟಾಗಿದೆ. ಪ್ರವಾಹ ಪೀಡಿತ ತಾಲೂಕುಗಳಲ್ಲಿ ಮಾರ್ಗಸೂಚಿಯ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸಾಂದರ್ಭಿಕ ರಜೆ ಕುರಿತಂತೆ ಪೊಲೀಸ್ ಸಿಬ್ಬಂದಿಗೆ ಇಲ್ಲಿದೆ ಮಹತ್ವದ ಮಾಹಿತಿ
ರಾಜ್ಯ ಸರ್ಕಾರ ಪ್ರವಾಹ ಪೀಡಿತ ಎಂದು ಘೋಷಿಸಿರುವ ತಾಲೂಕುಗಳು
ಧಾರವಾಡ ಜಿಲ್ಲೆಯ ಕಲಘಟಗಿ, ಕುಂದಗೋಳ, ನವಲಗುಂದ, ಅಳ್ನಾವರ
ದಾವಣಗೆರೆ-ಹರಿಹರ, ಹೊನ್ನಾಳಿ, ನ್ಯಾಮತಿ
ರಾಯಚೂರು-ದೇವದುರ್ಗ, ಲಿಂಗಸೂಗೂರು, ರಾಯಚೂರು
ಹಾವೇರಿ-ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರುಉ, ರಾಣೆಬೆನ್ನೂರು, ಸವಣೂರು, ಶಿಗ್ಗಾಂವ್, ರಟ್ಟಿಹಳ್ಳಿ
ಬೆಳಗಾವಿ-ಅಥಣಿ, ಬೈಲಹೊಂಗ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಖಾನಪುರ, ರಾಯಭಾಗ, ರಾಮದುರ್ಗ, ಸವದತ್ತಿ, ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ
ಬಾಗಲಕೋಟೆ- ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಲ,ಗುಳೇದ್ ಗುಡ್ಡ, ಇಳಕಲ್
ಗದಗ- ನರಗುಂದ, ರೋಣ ಸೇರಿದಂತೆ ಒಟ್ಟು 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

CKNEWSKANNADA / BRASTACHARDARSHAN CK NEWS KANNADA