ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಸಡಗರ, ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಕಾಂಗ್ರೆಸ್ ಯುವ ನಾಯಕರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಅಂಗವಾಗಿ ರಾಯಣ್ಣ ಭಾವಚಿತ್ರಕ್ಕೂ ಪೂಜೆ ಸಲ್ಲಿಸಲಾಯಿತು.
ಹಿಲ್ ಗಾರ್ಡನ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.