ಗೋಕಾಕ : ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಭಾನುವಾರ ಆಚರಿಸಿದರು.
ಬಳಿಕ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ‘ ಶಿಕ್ಷಕ ‘ ಹೆಸರೇ ಸೂಚಿಸುವಂತೆ ಶಿ-ಶಿಸ್ತು, ಕ್ಷ-ಕ್ಷಮೆ, ಕ-ಕರುಣೆ ಅಥವಾ ಶಿಸ್ತುಗಾರನಾಗಿ ವಿದ್ಯಾರ್ಥಿಗಳ ಜ್ನಾನದಾಹಕ್ಕೆ ತಕ್ಕಂತೆ, ಕ್ಷಣ ಕ್ಷಣಕ್ಕು ಉಲ್ಲಾಸ ಬರಿತನಾಗಿ , ಕಠಿಣವಾದದ್ದನ್ನು ವಿದ್ಯಾರ್ಥಿಗಳ ಮನಸ್ಸಿಗೆ ನಾಟುವಂತೆ ಬಿಡದೇ ಪಠಿಸುವವನೇ ಶಿಕ್ಷಕ. ಮುದ್ದು ಮಕ್ಕಳ ಮನಸ್ಸನ್ನು ಅರಿತು ಅವರನ್ನು ಪ್ರಗತಿಯೆಡೆಗೆ ಕೊಂಡೊಯ್ಯಬಲ್ಲ ಏಕೈಕ ನೇತಾರನೆ ಶಿಕ್ಷಕರಾಗಿದ್ದಾರೆ ಎಂದರು.
ನಮ್ಮ ದೇಶದ ಹೆಮ್ಮೆಯ ತತ್ವಶಾಸ್ತ್ರಜ್ಞ, ರಾಜನೀತಿಜ್ಞ ಮತ್ತು ಪ್ರಥಮ ಉಪರಾಷ್ಟ್ರಪತಿ ಎರಡನೇ ರಾಷ್ಟ್ರಪತಿಯಾಗಿ ಸೇವೆಸಲ್ಲಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವ ವಿಷಯ ತಮಗೆಲ್ಲಾ ತಿಳಿದಿದೆ. ಶಿಕ್ಷಣ ಕ್ಷೇತ್ರದ ಮಹತ್ವವನ್ನು ಕುರಿತು ಜನರಿಗೆ ಅರಿವು ಮೂಡಿಸಲು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ಸಿಬ್ಬಂದಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.