ಹಾನಗಲ್: ಜನಪರವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಉಪಚುನಾವಣೆಯಲ್ಲಿ ಮತದಾರರು ಆಶೀರ್ವಾದ ಮಾಡಬೇಕು ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಹಾನಗಲ್ ಮತಕ್ಷೇತ್ರದ ಅಕ್ಕಿ ಆಲೂರು ಜಿಪಂ ವ್ಯಾಪ್ತಿಯ ಸುರಳಸವರ ಗ್ರಾಮದಲ್ಲಿ ಉಪಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರಿಗೆ ಜನರು ಮತ ನೀಡಿ ಬಹುಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ ಸೇರಿ ಅನೇಕ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.