ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ನಂತರ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರಲಿಲ್ಲ. ಹೀಗಾಗಿ, ಸತೀಶ ಜಾರಕಿಹೊಳಿಯವರು ಇಂದು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಮೇಲ್ಮನೆ ಚುನಾವಣೆಯನ್ನು ಯಾವ ರೀತಿಯಾಗಿ ಎದುರಿಸಬೇಕು ಎಂಬುದರ ಕುರಿತು ಸಹ ಇಬ್ಬರು ನಾಯಕರು ಚರ್ಚೆ ಮಾಡಿರುವ ಸಾಧ್ಯತೆ ಇದೆ.