ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು.
ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಅಲ್ಲಿನ ವ್ಯವಸ್ಥೆಯ ಕುರಿತು ಸತೀಶ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳ ಕುರಿತು ವಿಚಾರಿಸಿದರು.
ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸ್ಥಳದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ರೋಗಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಒದಗಿಸಿ ಎಂದು ತಿಳಿಸಿದರು.
ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
CKNEWSKANNADA / BRASTACHARDARSHAN CK NEWS KANNADA