ಗೋಕಾಕ : ತಾಲ್ಲೂಕಿನ ತಳಕಟ್ಟನಾಳ ಗ್ರಾಮದಲ್ಲಿ ಕನಕದಾಸರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.
ದಾಸ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗ್ರಾಮದ ಮುಖಂಡರು, ಮಕ್ಕಳು ಭಾಗವಹಿಸಿದ್ದರು.
ಬಳಿಕ ರಾಹುಲ್ ಜಾರಕಿಹೊಳಿ ಮಾತನಾಡಿ, ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ತಿಳಿಸಿದರು.
ಕನಕದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು. ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರು. ವಿಶ್ವ ಮಾನವ ಕಲ್ಪನೆ ಹೊಂದಿದ್ದ ಮಾನವೀಯ ಗುಣಗಳನ್ನು ಪ್ರತಿಪಾದಿಸಿ, ಸಮಾನತೆ ಸಾರಿದರು ಎಂದು ತಿಳಿಸಿದರು.
ಲಕ್ಷ್ಮಣ ಹೊಸಗುಪ್ಪಿ, ವಿಠ್ಠಲ ಮುರಕಿಬಾವಿ, ನಿಂಗಪ್ಪ ದೊಡ್ಡಮನಿ, ಲಕ್ಷ್ಮಣ ಗೌಡ ಪಾಟೀಲ, ವೀರುಪಾಕ್ಷಿ ಮುಂಗರವಾಡಿ, ಲಖನ್ ಹುಲಕುಂದ, ಕೆಂಪಣ್ಣ ಹುಲಕುಂದ, ಯಲ್ಲಪ್ಪ ಕೌಜಲಗಿ, ಹನುಮಂತ ನಾಯಕ ಸೇರಿದಂತೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.