Breaking News

ಕಾಂಗ್ರೆಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ: ರಮೇಶ ಜಾರಕಿಹೊಳಿ


ನಿಪ್ಪಾಣಿ : ಕಾಂಗ್ರೆಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಬೇಕಾಯಿತು ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶುಕ್ರವಾರದಂದು ನಿಪ್ಪಾಣಿ ಮತಕ್ಷೇತ್ರದ ಗ್ರಾಪಂ, ಪಪಂ ಹಾಗೂ ನಗರಸಭೆ ಸದಸ್ಯರಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸಮಗ್ರ ಪ್ರಗತಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು. ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಪರವಾಗಿ ಮತಯಾಚಿಸಲು ಇಲ್ಲಿಗೆ ಬಂದಿದ್ದೇನೆ. ಮೊದಲ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತ ಯಾರಿಗೆ ಚಲಾಯಿಸಬೇಕೆಂಬುದು ಇಷ್ಟರಲ್ಲಿಯೇ ವರಿಷ್ಟರು ಹೇಳಲಿದ್ದಾರೆ. ಅದರಲ್ಲೂ ಕವಟಗಿಮಠ ಅವರನ್ನು ಗೆಲ್ಲಿಸಬೇಕಿದೆ. ಅದರಂತೆ ಕಾಂಗ್ರೇಸ್ ಅಭ್ಯರ್ಥಿಯನ್ನು ಎಲ್ಲರೂ ಒಗ್ಗೂಡಿ ಸೋಲಿಸಬೇಕಿದೆ ಎಂದು ಹೇಳಿದರು.
ಹಾಲಿ ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಅಥವಾ
ಹಿರಿಯ ಮುಖಂಡ ಪ್ರಕಾಶ ಹುಕ್ಕೇರಿ ಅವರಿಗೆ ಟಿಕೇಟ್ ಸಿಕ್ಕಿದ್ದಲ್ಲಿ ಈ ಚುನಾವಣೆಯಲ್ಲಿ ಲಖನ್ ಅವರು ಸ್ಪರ್ಧೆ ಮಾಡುತ್ತಿರಲಿಲ್ಲ. ಯಾವುದೇ ಆಮೀಷಗಳಿಗೆ ಒಳಗಾಗಬೇಡಿ. ಗೂಂಡಾ ಪ್ರವೃತ್ತಿಯಿಂದ ಮೆರೆಯುತ್ತಿರುವ ಕೆಪಿಸಿಸಿ ಅಧ್ಯಕ್ಷರಿಗೆ ತಕ್ಕ ಪಾಠ ಕಲಿಸಲು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ನ್ನು ಧೂಳಿಪಟ ಮಾಡುವಂತೆ ರಮೇಶ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು.

ಅಭಿನಂದನ ಪಾಟೀಲ, ವಿಲಾಸ ಗಾಡಿವಡ್ಡರ,
ಅಶೋಕಕುಮಾರ ಅಸೋಧೆ, ಜಯವಂತ ಕಾಂಬಳೆ, ಸಂಜಯ ಕಾಗೆ, ಅಮೀತ ಸಿಂಧೆ, ಉಮೇಶ ಪಾಟೀಲ, ಸೇರಿದಂತೆ ಇತರೇ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ