ಬೆಳಗಾವಿ: ಕೋವಿಡ್ ನಿಂದ ಮೃತ ಪಟ್ಟ ಕುಟುಂಬಸ್ಥರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಚೆಕ್ ವಿತರಿಸಿದರು.
ಬೆಳಗಾವಿ ಜಾದವ ನಗರ ಕಚೇರಿಯಲ್ಲಿಕೋವಿಡ್ ನಿಂದ ಮೃತ ಪಟ್ಟ ಕುಟುಂಬಸ್ಥರಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಕೋವಿಡ್ ನಿಂದ ಹಲವು ಜನ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಅವರನ್ನು ಮರೆತು ಜೀವನ ನಡೆಸಬೇಕು. ಸರ್ಕಾರ ಮೃತರ ಕುಟುಂಬಸ್ಥರಿಗೆ ತಲಾ ಒಂದು ಲಕ್ಷ ರೂ. ನೀಡುತ್ತಿದ್ದು, ಈ ದುಡ್ಡನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಒಟ್ಟು ಎಂಟು ಜನ ಮೃತರ ಕುಟುಂಬಸ್ಥರಿಗೆ ಚೆಕ್ ವಿತರಿಸಿದರು.