Breaking News

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ


ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಅಲ್ಲದೆ ಕಾವೇರಿ–ಪೆನ್ನಾರ್‌, ಪೆನ್ನಾರ್‌–ಕೃಷ್ಣಾ, ಗೋದಾವರಿ–ಕೃಷ್ಣ ಸೇರಿದಂತೆ ನದಿ ಜೋಡಣೆಯ ನಿರ್ಧಾರ ರಾಷ್ಟ್ರವನ್ನು ಸಮೃದ್ಧ ಮಾಡುವಲ್ಲಿ ಮಹತ್ವ ಪಡೆದುಕೊಂಡಿದೆ. ಇದರೊಟ್ಟಿಗೆ ಸಹಕಾರಿ ಸಂಘಗಳ ಮೇಲಿನ ತೆರಿಗೆಯನ್ನು ಇಳಿಸಿರುವುದು, ಸೌರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಆದ್ಯತೆ ಕೊಟ್ಟಿರುವುದು, ಹೊಸ ಕಂಪನಿಗಳಿಗೆ ತೆರಿಗೆ ವಿನಾಯಿತಿ, ದೇಶದಲ್ಲಿ ಡಿಜಿಟಲ್ ರೂಪಾಯಿ ಘೋಷಣೆ, ಔಷಧಗಳ ಮೇಲಿನ ಸುಂಕ ಇಳಿಕೆಯಂತಹ ಜನಪರ ಘೋಷಣೆಗಳನ್ನು ಗಮನಿಸಿದರೆ ಇದೊಂದು ಜನಪ್ರಿಯ ಮತ್ತು ಜನಪರವಾದ, ರೈತಪರವಾದ ಬಜೆಟ್ ಎನ್ನುವುದರಲ್ಲಿ ಅನುಮಾನವಿಲ್ಲ. ಕೊರೋನಾ ವೇಳೆ ಮಕ್ಕಳು ಅನುಭವಿಸಿದ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಪಿಎಂ ಇ–ವಿದ್ಯಾ’ ಯೋಜನೆ ಅಡಿಯಲ್ಲಿ ‘ಒನ್ ಕ್ಲಾಸ್ ಒನ್ ಟಿವಿ ಚಾನೆಲ್’ ಅನ್ನು ವಿಸ್ತರಿಸಿದ್ದು ವಿದ್ಯಾರ್ಥಿಗಳಿಗೆ ಬಹಳ ಅನುಕೂಲ ಮಾಡಿಕೊಟ್ಟಿದ್ದಾರೆ. 5ಜಿ ಹರಾಜಿಗೆ ಕ್ರಮ ಕೈಗೊಂಡಿರುವುದು ದೂರ ಸಂಪರ್ಕ ಕ್ಷೇತ್ರದಲ್ಲಿ ದೇಶವನ್ನು ಹೊಸ ಮೈಲಿಗಲ್ಲಿನತ್ತ ಕೊಂಡೊಯ್ಯಲಿದೆ.

– ಬಾಲಚಂದ್ರ ಜಾರಕಿಹೊಳಿ, ಶಾಸಕ, ಕೆಎಂಎಫ್ ಅಧ್ಯಕ್ಷ


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ