Breaking News

ಗೋವಾ ಚುನಾವಣೆ: ಸ್ಟಾರ್‌ ಪ್ರಚಾರಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ನೇಮಕ!


ನವದೆಹಲಿ: ಇದೇ ಫೆ. 14 ರಂದು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಎಐಸಿಸಿ 30 ಜನರನ್ನೊಳಗೊಂಡ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಸ್ಟಾರ್‌ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ.

ಈ ಬಾರಿ ಗೋವಾದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರ ತರಲೇಬೇಕೆಂದು ಪಣತೊಟ್ಟಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು, ತಮ್ಮದೇಯಾದ ತಂಡವನ್ನು ರಚಿಸಿಕೊಂಡು ಗೆಲುವಿಗೆ ರಣತಂತ್ರ ಹೆಣೆದಿದ್ದಾರೆ. ನಾಲ್ಕು ದಿನ ಗೋವಾದಲ್ಲಿ ಬೀಡುಬಿಟ್ಟಿದ ಅವರು, ವಿವಿಧ ವಿಧಾನಸಭಾ ಮತಕ್ಷೇತ್ರಗಳಿಗೆ ಭೇಟಿ ಕೊಟ್ಟು ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು.

ಈ ಚುನಾವಣೆಯನ್ನು ಗೆಲ್ಲಲೇಬೇಕೆಂದು ಹಠತೊಟ್ಟಿರುವ ಸತೀಶ್‌ ಜಾರಕಿಹೊಳಿ ಅವರು, ಗೋವಾ ಕಾಂಗ್ರೆಸ್‌ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಕೂಡ ಮಾಡಿದ್ದಾರೆ. ತಮ್ಮದೇ ಕಾರ್ಯಕರ್ತರ ಪಡೆಯನ್ನು ಹೊಂದಿರುವ ಅವರು, ಒಂದೊಂದು ಕ್ಷೇತ್ರದಲ್ಲಿ ಒಂದೊಂದು ತಂಡವನ್ನು ರಚಿಸಿ, ಅವರಿಗೆ ಚುನಾವಣಾ ಜವಾಬ್ದಾರಿಗಳನ್ನು ನೀಡಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಅಂತ ನಾಯಕರನ್ನು ಎಐಸಿಸಿ ಸ್ಟಾರ್‌ ಪ್ರಚಾರಕರನ್ನಾಗಿ ನೇಮಿಸಿ, ಆದೇಶಿಸಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ