ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.*