ಬೆಳಗಾವಿ: ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ ಕೆಲವು ಶಾಸಕರು ಕಾಂಗ್ರೆಸ್ ಗೆ ಮರು ಸೇರ್ಪಡೆಯಾಗಲು ಆಸಕ್ತಿ ತೊರಿದ್ದಾರೆ ಎಂದು ಹೇಳಿಕೆ ನೀಡಿದ್ದೇನೆ. ವಿನಹಃ ಎಲ್ಲಾ ಶಾಸಕರು ಅಲ್ಲಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸ್ಪಷ್ಟಿಕರಣ ನೀಡಿದ್ದಾರೆ.
ಬಿಜೆಪಿ ಸೇರಿರುವ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತೆ ಕಾಂಗ್ರೆಸ್ ಗೆ ವಾಪಸ್ ಬರುತ್ತಾರೆ ಎಂದು ಕೆಲವು ಸುದ್ದಿ ವಾಹಿನಿ ಮತ್ತು ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿದೆ. ಆದರೆ ಭಾನುವಾರ ದಾವಣಗೆರೆಯಲ್ಲಿ ಈ ರೀತಿಯ ಹೇಳಿಕೆ ನಾವು ನೀಡಿಲ್ಲವೆಂದು ಅವರು ತಿಳಿಸಿದ್ದಾರೆ.