Breaking News

ಸಚಿವ ಈಶ್ವರಪ್ಪ ಹೇಳಿಕೆ ಒಪ್ಪಲು ಸಾಧ್ಯವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ


ಹಿಜಾಬ್‌ ವಿವಾದ ಹಳ್ಳಿ ಹಳ್ಳಿಗಳಿಗೆ ಹರಡಲು ಬಿಜೆಪಿ ಸರ್ಕಾರವೇ ಕಾರಣ

 

ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಗಂಭೀರವಾಗಿ ಪರಿಗಣಿಸಿದ್ದು, ಕಾಂಗ್ರೆಸ್‌ ನಾಯಕರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

 

ಕೆಲ ದಿನಗಳ ಹಿಂದೆ ಸಚಿವ ಈಶ್ವರಪ್ಪ ಕೇಸರಿ ಧ್ವಜ ಕೆಂಪು ಕೋಟೆ ಮೇಲೆ ಹಾರಿಸುತ್ತೇವೆ ಎಂದು ಹೇಳಿದ್ದಾರೆ. ಮುಂದೊಂದು ದಿನ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದರೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

 

ದೇಶದ ಇತಿಹಾಸ ಬದಲಾವಣೆ ಮಾಡಲು ಬಿಜೆಪಿಯವರು ಮುಂದಾಗಿದ್ದಾರೆ. ಅಧಿವೇಶನದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಚರ್ಚೆ ಮಾಡುವುದು ಅಗತ್ಯ. ಆದರೆ ಅದಕ್ಕಿಂತ ರಾಷ್ಟ್ರ ಹಿತರಕ್ಷಣೆ ಕೂಡ ಪ್ರಮುಖವಾಗಿದೆ. ಹಾಗಾಗಿ ಕಾಂಗ್ರೆಸ್‌ ನಾಯಕರು ದೇಶದ್ರೋಹಿ ಹೇಳಿಕೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಧರಣಿ ಮಾಡುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಹಿಜಾಬ್‌ ವಿವಾದ ಹಳ್ಳಿ ಹಳ್ಳಿಗಳಿಗೆ ಹರಡಲು ಬಿಜೆಪಿ ಸರ್ಕಾರವೇ ಕಾರಣ. ಈ ಸಮಸ್ಯೆ ನಿವಾರಣೆಗೆ ಸರ್ಕಾರವೇ ಶೀಘ್ರ ಕ್ರಮ ಕೈಗೊಳ್ಳಬೇಕು. ಇನ್ನು ಏನೂ ತಿಳಿಯದ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಡು ಪ್ರತಿಭಟನೆ ಮಾಡುತ್ತಿದ್ದಾರೆ. ಆ ವಿದ್ಯಾರ್ಥಿಗಳಿಗೆ ವಸ್ತುಸ್ಥಿತಿ ಅರ್ಥವಾಗಿಲ್ಲ. ಅವರನ್ನು ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

 

ಸಿಎಎ, ಎನ್.ಆರ್.ಸಿ ಸಂಬಂಧಿಸಿದಂತೆ ಸಾಕಷ್ಟು ಪ್ರತಿಭಟನೆಗಳು ನಡೆದವು. ಆದರೆ ಈಗ ಪ್ರತಿಭಟನೆ ಕಡಿಮೆಯಾಗಿವೆ. ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರು ತಮ್ಮ ಅನಿಸಿಕೆ ಹೇಳಿದ್ದಾರೆ. ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇದೆ. ಎಲ್ಲಾ ಧರ್ಮಗಳನ್ನು ಗೌರವಿಸುವುದನ್ನು ನಾವು ಕಲಿಯಬೇಕೆಂದರು.

 

ಶಿಕ್ಷಣ ಕಲಿಯುವ ವಯಸ್ಸಿನಲ್ಲಿ ಧರ್ಮ, ಜಾತಿ ಅಂತ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡಬಾರದು, ಹೀಗೆ ಪರಿಸ್ಥಿತಿ ಮುಂದುವರೆದರೆ ವಿದ್ಯಾರ್ಥಿಗಳ ಬದುಕು ಹಾಳಾಗುತ್ತದೆ. ಶೀಘ್ರ ರಾಜ್ಯ ಸರ್ಕಾರ, ಶಿಕ್ಷಣ ಸಂಸ್ಥೆಗಳು ಈ ಸಮಸ್ಯೆ ನಿವಾರಣೆಗೆ ಅಂತ್ಯ ಹಾಡಬೇಕೆಂದು ಸಲಹೆ ನೀಡಿದರು.

 

ವಿಧಾನ ಪರಿಷತ್‌, ಪದವಿಧರರ ಮತಕ್ಷೇತ್ರದ ಚುನಾವಣೆಗೆ ಈಗಾಗಲೇ ಸಿದ್ದತೆ ನಡೆದಿದ್ದು, ಶಾಸಕರ ಸಭೆಯನ್ನು ಮಾಡಿದ್ದೇವೆ ಎಂದ ಅವರು, ಗೋವಾದಲ್ಲಿ ಕಾಂಗ್ರೆಸ್‌ ಪರ ಅಲೆ ಇದ್ದು, ಕಾಂಗ್ರೆಸ್‌ ಪಕ್ಷ ಬಹುಮತದಿಂದ ಜಯಸಾಧಿಸುವ ವಿಶ್ವಾಸವಿದೆ ಎಂದರು.

 

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡ ಸುನೀಲ್ ಹನಮಣ್ಣವರ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಸಿದ್ದಿಕ ಅಂಕಲಗಿ, ಇಬ್ರಾನ್ ತಪಕಿರ್ ಸೇರಿದಂತೆ ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ