ಬೆಳಗಾವಿ: ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಿಸಿದ್ದಾರೆ.

ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದಾರೆ.
ನಾಳೆ (ಫೆ.27) ಭೂತರಾಯನಹಟ್ಟಿ ಗ್ರಾಮಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA