Breaking News

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ!


ಗೋಕಾಕ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು , ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು .

ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು . ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು , ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ 100 ಹಾಸಿಗೆ ಆಸ್ಪತ್ರೆಯನ್ನು 250 ಕ್ಕೆ ಏರಿಸಲು ಕ್ರಮ ಜರುಗಿಸಲಾಗಿದ್ದು ,ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಆರೋಗ್ಯವಂತ ಸಮಾಜ ನಿರ್ಮಿಸಲು ಸಹಕರಿಸಬೇಕೆಂದು ಮನವಿ ಮಾಡಿದರು . ಎಲ್ಲಾ ತಾಯಂದಿರು ತಮ್ಮ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಫಲ್ಸ್ ಪೊಲೀಯೋ ಹಾಕಿಸಿ ಪೊಲೀಯೋ ಮುಕ್ತ ಭಾರತ ನಿರ್ಮಿಸಲು ಸಹಕರಿಸುವಂತೆ ಕರೆ ನೀಡಿದರು .

ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ , ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ , ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ , ಉಪಾಧ್ಯಕ್ಷ ಬಸವರಾಜ ಆರೆನ್ನವರ , ಬಿಇಒ ಜಿ.ಬಿ.ಬಳಗಾರ , ಡಾ.ಎಂ.ಎಂ ಕೋಣಿ , ಡಾ.ಬಿ.ಎ. ಬಾಗಲಕೋಟೆ , ಡಾ.ದೀಪಾ ತುಬಾಕಿ , ಡಾ . ಅಂಗಡಿ , ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ , ದಿಲೀಪ್ ಮೆಳವಂಕಿ , ಪರಮೇಶಿ ಗುಲ್ ಸೇರಿದಂತೆ ನಗರಸಭೆ ಸದಸ್ಯರು ಉಪಸ್ಥಿತರಿದ್ದರು .


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ