ಗೋಕಾಕ : ಕರ್ನಾಟಕದ ಯುವ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಅಪ್ಪು ಅಭಿನಯದ ಚಿತ್ರ ‘ಜೇಮ್ಸ್’ ತೆರೆ ಕಂಡಿದ್ದು, ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಗೋಕಾಕ ನಗರದಲ್ಲಿ ಶ್ರೀ ರಾಮ ಸೇನೆ ಗೋಕಾಕ್ ತಾಲೂಕು ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ಇಂದು ನೇತ್ರದಾನ ನೋಂದಣಿ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದರು.
ಕೋಟ್ಯಂತರ ಅಭಿಮಾನಿಗಳ ಮನದಲ್ಲಿ ಇನ್ನೂ ಜೀವಂತವಾಗಿರುವ ಪುನೀತ್ ರಾಜಕುಮಾರ್, ಎಂದೆಂದಿಗೂ ಅಜರಾಮರ. ಮರಣದ ನಂತರ ಅಪ್ಪು ತನ್ನ 2 ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದರು. ಅಪ್ಪು ಮಾನವೀಯ ಕಾರ್ಯವನ್ನೇ ಮಾದರಿಯಾಗಿ ತೆಗೆದುಕೊಂಡ ಗೋಕಾಕದ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ಇಂದು ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನೇತ್ರದಾನ ಶಿಬಿರ ಮತ್ತು ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ.
ಅಪ್ಪು ಅಭಿಮಾನಿಗಳಿಂದ ನೇತ್ರದಾನ ಮತ್ತು ರಕ್ತದಾನ ಶಿಬಿರ ಆಯೋಜನೆ ಪುನೀತ್ ರಾಜಕುಮಾರ್ ಅವರ ಸಾಮಾಜಿಕ ಕಳಕಳಿಗೆ ನಾವೆಲ್ಲರೂ ಕೈಜೋಡಿಸುವ ಮೂಲಕ ರಕ್ತದಾನ ಮತ್ತು ನೇತ್ರದಾನ ಮಾಡುವ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸೋಣ ಎಂದರು.