Breaking News

ರೈತರು ಕಡಿಮೆ ಭೂಮಿಯಲ್ಲಿ ಹೆಚ್ಚಿನ ಇಳುವರಿ ಪಡೆಯಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ


ಮೂಡಲಗಿ: ಪ್ರಸ್ತುತ ನೀರನ್ನು ಸರಿಯಾಗಿ ಸದ್ಬಳಕೆ ಮಾಡಿ ಶೇಖರಣೆ ಮಾಡುವುದು ಅಗತ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

 

ಪಟಗುಂದಿ ಗ್ರಾಮದಲ್ಲಿ ಸತೀಶ್ ಶುಗರ್ಸ ಹುಣಶ್ಯಾಳ ಪಿ.ಜಿ ಹಾಗೂ ಶ್ರೀ 1008 ಸುಪಾರ್ಶ್ವನಾಥ ದಿಗಂಬರ ಜೈನ್ ಮಂದಿರ ಶಿಕ್ಷಣ ಟ್ರಸ್ಟ್ ಪಟಗುಂದಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕಬ್ಬಿನ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.

 

ಭೂಮಿಗೂ ವಯಸ್ಸು ಇದೆ. ಹೀಗಾಗಿ ಪರಿಸರ ರಕ್ಷಣೆ ಮಾಡಬೇಕು. ಈಗಾಗಲೇ ಓಝೋನ್‌ ಪದರು ಹಾಳಾಗಿದ್ದು, ಮಳೆ, ಬೆಳೆ ಮೇಲೆ ಪರಿಣಾಮ ಬೀರುತ್ತಿದ್ದು, ಪರಿಸರ ರಕ್ಷಣೆಯೂ ಶಾಸಕರು, ಮಂತ್ರಿಗಳಿಂದ ಸಾಧ್ಯವಿಲ್ಲ. ಎಲ್ಲರೂ ಪರಿಸರ ರಕ್ಷಣೆಗೆ ಗಮನ ಹರಿಸಬೇಕೆಂದು ತಿಳಿಸಿದರು.

 

ರೈತರು ಮಾರ್ಗದರ್ಶನ ಪಡೆದು ಕಡಿಮೆ ಖರ್ಚಿನಲ್ಲಿ ಇದ್ದ ಭೂಮಿಯಲ್ಲಿ ಹೆಚ್ಚಿನ ಇಳುವರಿ ತೆಗೆಯಲು ಮುಂದಾಗಬೇಕು. ಕಳೆದ ನಾಲ್ಕು ವರ್ಷದಿಂದ ಮಳೆ ಚೆನ್ನಾಗಿ ಆಗುತ್ತಿದ್ದು, ನೀರಿನ ಕೊರತೆ ಇಲ್ಲ. ಕಾರಣ ರೈತರು ಕೃಷಿಯಲ್ಲಿ ತೊಡಗಿ ಪ್ರಗತಿ ಹೊಂದಬೇಕೆಂದು ತಿಳಿಸಿದರು.

ಕಬ್ಬು ಬೆಳೆಯಲ್ಲಿ ಸಾಕಷ್ಟು ಸುಧಾರಣೆಗಳು ಆಗಿದ್ದು, ಅವುಗಳನ್ನು ರೈತರು ಅಳವಡಿಸಿಕೊಳ್ಳಬೇಕು. ಜತೆಗೆ ಮಕ್ಕಳ ಓದಿನ ಕಡೆ ಪ್ರಾಮುಖ್ಯತೆ ನೀಡಬೇಕು. ಅನಾವಶ್ಯಕ ಖರ್ಚಿಗೆ ಮೀತಿ ಇರಲಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಅಜಿತ್ ಹೊಸಮನಿ. ಜೆಡಪ್ಪಾ, ಮಲ್ಲಿಕಾರ್ಜುನ ಕಬ್ಬೂರ, ರಾಜು ಕಸ್ತೂರಿ, ಪಾರಿಶ ಹುಕ್ಕೇರಿ, ಎಚ್.ಪಿ. ನಾಯಿಕ ಸೇರಿದಂತೆ ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ