Breaking News

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!


ಗೋಕಾಕ: ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಅವರು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಸಾಮಾಜಿಕ ನ್ಯಾಯದೊಂದಿಗೆ ಬಿಜೆಪಿ ನೇತ್ರತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು ಯೋಜನೆಗಳ ಜಾರಿಗೊಳಿಸುತ್ತಿದ್ದು, ಅವುಗಳನ್ನು ಜನತೆಯಲ್ಲಿ ಅರಿವು ಮೂಢಿಸಿ ಅವರಿಗೆ ತಲುಪಿಸಲು ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಎಲ್ಲರು ಸಂಘಟಿತರಾಗಿ ಈ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.

ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ರಜನಿ ಜಿರಗ್ಯಾಳ ಮಾತನಾಡಿ, ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ಒಳ್ಳೆಯ ನಾಗರಿರನ್ನಾಗಿ ಮಾಡಿ, ಮಕ್ಕಳಲ್ಲಿ ಲಿಂಗ ಬೇದ ಮಾಡದೆ ಸಮಾನತೆ ಮನೋಭಾವದಿಂದ ಬೆಳೆಸಿ ಕಿತ್ತೂರು ರಾಣಿಚೆನ್ನಮ್ಮ, ಝಾನ್ಸಿರಾಣಿ ಲಕ್ಷಿö್ಮÃಬಾಯಿಯರಂತೆ ಅವರನ್ನು ಧೈರ್ಯಶಾಲಿಗಳನ್ನಾಗಿ ಮಾಡಿ, ಪ್ರಧಾನಿ ಮೋದಿಯವರು ಮಹಿಳೆಯವರ ಅಭಿವೃದ್ಧಿಗಾಗ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಸದೃಢರಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಹಿಳಾ ಕೋವಿಡ್ ವಾರಿರ‍್ಸ್ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಸನ್ಮಾನಿಸಲಾಯಿತು.

ವೇದಿಕೆಯ ಮೇಲೆ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮಹಿಳಾ ಮೋರ್ಚಾ ಅಧ್ಯಕ್ಷರುಗಳಾದ ರಾಜೇಶ್ವರಿ ಒಡೆಯರ, ಭಾರತಿ ಅಂಗಡಿ, ಸಮಾಜ ಸೇವಕಾರ ರೇಖಾ ಕಂಬಾರ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲ್ಹಾರ, ಶಿಲ್ಪಾ ಗೋಡಿಗೌಡರ ಇದ್ದರು.

ಈ ಸಂದರ್ಭದಲ್ಲಿ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳಾದ ಲಕ್ಷ್ಮಣ ಖಡಕಭಾಂವಿ, ಸುರೇಶ ಪತ್ತಾರ, ಮಂಜುನಾಥ ಪ್ರಭುನಟ್ಟಿ, ಮಲ್ಲಿಕಜಾನ ತಳವಾರ, ಕಿರಣ ಡಮಾವiಗರ, ಶ್ರೀದೇವಿ ತಡಕೋಡ, ಲಕ್ಷ್ಮೀ ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ